ಬೆಂಗಳೂರು :
ರಾಜ್ಯದ ಮೂರು ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ ಮಾಡಿದೆ.

ಚಿಕ್ಕಬಳ್ಳಾಪುರದಿಂದ ರಕ್ಷಾ ರಾಮಯ್ಯ, ಬಳ್ಳಾರಿಯಿಂದ ತುಕಾರಾಂ ಹಾಗೂ ಚಾಮರಾಜನಗರದಿಂದ ಸುನೀಲ್‌ ಬೋಸ್‌ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಗಳ 9ನೇ ಪಟ್ಟಿ ಪ್ರಕಟವಾಗಿದೆ. ಇದರಲ್ಲಿ ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು, ಒಂದು ಕ್ಷೇತ್ರದ ಅಭ್ಯರ್ಥಿ ಕಗ್ಗಂಟಾಗಿ ಉಳಿದಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಕಾಯ್ದಿರಿಸಿದೆ. ನಿರೀಕ್ಷೆಯಂತೆ ಬಳ್ಳಾರಿ ಲೋಕಸಭಾ ಟಿಕೆಟ್ ಇ ತುಕಾರಾಂ, ಚಾಮರಾಜನಗರ ಕ್ಷೇತ್ರದ ಟಿಕೆಟ್​ ಸಚಿವ ಎಚ್​.ಸಿ.ಮಹಾದೇವಪ್ಪ ಪುತ್ರ ಸುನೀಲ್ ಬೋಸ್​ಗೆ ನೀಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ಸಿಕ್ಕಿದೆ.