ಬೆಳಗಾವಿ : ಬಿಜೆಪಿ ವರಿಷ್ಠರು ಕೊನೆಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರನ್ನು ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಣಕ್ಕಿಳಿಯುವ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಸಾಕಷ್ಟು ದಿನಗಳ ನಂತರ ತೂಗಿ ಅಳೆದು ಲೆಕ್ಕಾಚಾರ ಹಾಕಿದ ಬಿಜೆಪಿ ವರಿಷ್ಠರು, ಇಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಹೆಸರಿಗೆ ಅಧಿಕೃತವಾಗಿ ಮುದ್ರೆಯೊತ್ತಿದ್ದಾರೆ. ಈ ಮೂಲಕ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ಬಿಜೆಪಿ ನಾಯಕರಿಂದ ವ್ಯಕ್ತವಾದ ವಿರೋಧಗಳಿಗೆ ಮಣಿಯದೆ ಟಿಕೆಟ್ ನೀಡುವ ಘೋಷಣೆ ಮಾಡಿದ್ದಾರೆ. ಈ ಮೂಲಕ ಇದುವರೆಗೆ ಇದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.