ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆಯಾಗಿದೆ. ಅದರೆ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ ಇಂಜಿನಿಯರಿಂಗ್ ಮತ್ತು ಐಟಿಐ ಗಳಿಗೆ ರಜೆ ಇರುವುದಿಲ್ಲ.
ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ :
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಶುಕ್ರವಾರ (ಆಗಸ್ಟ್ 2) ಉತ್ತರ ಕನ್ನಡ ಜಿಲ್ಲೆಯ 7 ತಾಲೂಕಿನ ಶಾಲೆ-ಪಿಯು ಕಾಲೇಜ್ ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಹಾಗೂ ಹವಾಮಾನ ಇಲಾಖೆಯು ಭಾರಿ ಮಳೆಯಾಗುವ ಮೆನ್ನೆಚ್ಚರಿಕೆ ನೀಡಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲೂಕಿನ ತಾಲೂಕಿನ ಎಲ್ಲಾ ಶಾಲೆಗಳು- ಪದವಿ ಪೂರ್ವ ಕಾಲೇಜುಗಳು ಹಾಗೂ ಐಟಿಐ ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಶುಕ್ರವಾರ (ಆಗಸ್ಟ್ 2) ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.