ಮಾಜಿ ಮುಖ್ಯಮಂತ್ರಿ SM ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾ‌ರ್ ಈ ಘೋಷಣೆ ಮಾಡಿದ್ದಾರೆ. ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಇರುತ್ತದೆ. ಅಲ್ಲದೆ, ನಾಳೆ ಬೆಳಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಹುಟ್ಟೂರಿಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತದೆ. ಅಲ್ಲಿನ ಜನರಿಗೆ 12 ರಿಂದ 3 ಗಂಟೆಯವರೆಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಇರುತ್ತದೆ ಎಂದಿದ್ದಾರೆ.