ಬೈಂದೂರು, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆಗಳಿಗೆ, ಪ್ರೌಢಶಾಲೆ ಹಾಗೂ ಪಿಯುಸಿ ಕಾಲೇಜುಗಳಿಗೆ ಜು.5 (ಶುಕ್ರವಾರ) ದಂದು ರಜೆ ಘೋಷಣೆ ಮಾಡಲಾಗಿದೆ.ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಈ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.