ಉಡುಪಿ : ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರ (ಜುಲೈ 9 )ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಂಪೂರ್ಣ ಜಿಲ್ಲೆಗೆ ಅನ್ವಯಿಸಿ ರಜೆ ಘೋಷಣೆ ಮಾಡಿದ್ದಾರೆ.
ಆದರೆ ಪದವಿ, ಸ್ನಾತಕೋತ್ತರ, ಡಿಪ್ಲೋಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ.