ಮಂಗಳೂರು : ಮಳೆ ಕಾರಣಕ್ಕೆ ಬಂಟ್ವಾಳ, ಸುಳ್ಯ, ಕಡಬ, ಬೆಳ್ತಂಗಡಿ, ಪುತ್ತೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ಶುಕ್ರವಾರವು ರಜೆ ಘೋಷಣೆ ಮಾಡಲಾಗಿದೆ.ಧಾರಾಕಾರವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳಿಗೆ ಜುಲೈ 19ರ (ಶುಕ್ರವಾರ) ರಜೆ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ, ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.