ಉಡುಪಿ : ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಆಗಸ್ಟ್ 2 ರಂದು ಶುಕ್ರವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆಯಾಗಿದೆ. ಅದರೆ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮೋ ಇಂಜಿನಿಯರಿಂಗ್ ಮತ್ತು ಐಟಿಐ ಗಳಿಗೆ ರಜೆ ಇರುವುದಿಲ್ಲ.