ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಅನುದಾನಿತ ಹಾಗೂ ಪಿಯುಸಿವರೆಗೆ ಮಂಗಳವಾರ (ಜುಲೈ 16 ರಂದು) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.