ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮಹಮ್ಮದ್ ರೋಷನ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅವರು ಇದುವರೆಗೆ ಹುಬ್ಬಳ್ಳಿ ಹೆಸ್ಕಾಂ ಎಂ ಡಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಿತೇಶ್ ಪಾಟೀಲ್ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದೆ.