ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಯನ್ನು ಸೇರಿಸುವಂತೆ ಸೆಪ್ಟಂಬರ್ 30, 2024 ರೊಳಗೆ ನಡೆಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತು.

ದೆಹಲಿ :
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಆರ್ಟಿಕಲ್ 370 ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ ಅವರ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಆರ್ಟಿಕಲ್ 370 ಬಗ್ಗೆ ಮಹತ್ವದ ತೀರ್ಪು ನೀಡಿದೆ. ಬಿಜೆಪಿ ಸರ್ಕಾರವು 2ನೇ ಬಾರಿಗೆ ಅಧಿಕಾರಕ್ಕೆ ಬಂದಾಗ 2019ರಲ್ಲಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಆರ್ಟಿಕಲ್ 370 ಅಡಿ ವಿಶೇಷಾಧಿಕಾರ ನೀಡಿಕೆ ಕೇವಲ ತಾತ್ಕಾಲಿಕ ನಿರ್ಧಾರವಷ್ಟೇ ಆಗಿತ್ತು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಯುದ್ಧದ ಸಂದರ್ಭದಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್‌, ಆರ್ಟಿಕಲ್ 370 ರದ್ದತಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಆರ್ಟಿಕಲ್ 370 ತಾತ್ಕಾಲಿಕ ಮಾತ್ರ.

ಇನ್ನು ಕೇಂದ್ರ ಸರ್ಕಾರಕ್ಕೆ, ರಾಷ್ಟ್ರಪತಿಗಳಿಗೆ ಆರ್ಟಿಕಲ್ 370 ರದ್ದತಿ ಅಧಿಕಾರ ಇದೆ. ರಾಷ್ಟ್ರಪತಿಗಳ ನಿರ್ಧಾರವೂ ಸುಪ್ರೀಂ ಕೋರ್ಟ್‌ನ ಪರಾಮರ್ಶೆಗೆ ಒಳಪಡುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಇದ್ದಾಗ ರಾಜ್ಯದಲ್ಲಿ ವಿಧಾನಸಭೆ ಇರಲಿಲ್ಲ ಎಂದು ಭಾವಿಸಬಾರದು ಎಂದಿರುವ ಸುಪ್ರೀಂ ಕೋರ್ಟ್‌, ಕರ್ನಾಟಕದ ಎಸ್‌. ಆರ್. ಬೊಮ್ಮಾಯಿ ಪ್ರಕರಣ ಉಲ್ಲೇಖಿಸಿದೆ.

 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಿದ್ದ ಸಂವಿಧಾನದ ಆರ್ಟಿಕಲ್ 370 ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ.

2019ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ರದ್ದು ಮಾಡಿದ್ದ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಪ್ರಾಂತ್ಯಗಳನ್ನು ವಿಭಜಿಸಿ ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿತ್ತು. ಈ ಭಾಗಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಗಳನ್ನೂ ರದ್ದು ಮಾಡಿತ್ತು.

 

ಕೇಂದ್ರದ ಈ ನಿಲುವು ಪ್ರಶ್ನಿಸಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ರಚನೆ ಮಾಡಿತ್ತು. ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಸಾರಥ್ಯದ ಪೀಠವು ಪ್ರಕರಣದ ಕುರಿತಾಗಿ ಸಮಗ್ರ ವಿಚಾರಣೆ ನಡೆಸಿತ್ತು. 16 ದಿನಗಳ ಕಾಲ ಸುದೀರ್ಘ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ರದ್ದು ಮಾಡಲು ಸಾಧ್ಯವಿಲ್ಲ ಎಂದು ಪ್ರತಿವಾದಿಗಳು ವಾದಿಸಿದ್ದರು. 1957 ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ ವಿಧಿ 370 ಅಡಿ ವಿಶೇಷ ಅಧಿಕಾರ ಜಾರಿಯಲ್ಲಿತ್ತು.

 

 

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಿತು. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ದೀರ್ಘ ಅವಧಿಯಿಂದ ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 16 ದಿನಗಳ ಕಾಲ ಸಮಗ್ರ ವಿಚಾರಣೆಗೆ ಸಾಕ್ಷಿಯಾಯಿತು. ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ತಮ್ಮ ವಾದಗಳನ್ನು ಮಂಡಿಸಿದರು, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಬಳಸಿದ ಕಾರ್ಯವಿಧಾನದ ಸಾಂವಿಧಾನಿಕತೆಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ನಂತರದ ರದ್ದತಿಯನ್ನು ಪರಿಶೀಲಿಸಲಾಯಿತು. ಅಂತಿಮವಾಗಿ ಸೋಮವಾರ ತೀರ್ಪು ಹೊರ ಬಂದಿದೆ.

ಏನಿದು ಆರ್ಟಿಕಲ್ 370?
ಆರ್ಟಿಕಲ್ 370 ಭಾರತೀಯ ಸಂವಿಧಾನದಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ನಿಬಂಧನೆಯಾಗಿದೆ. 1949 ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮಧ್ಯಂತರ ಪ್ರಧಾನ ಮಂತ್ರಿ ಶೇಖ್ ಅಬ್ದುಲ್ಲಾ ಅವರು ಭಾರತೀಯ ಸಂವಿಧಾನ ಸಭೆಯೊಂದಿಗೆ ಮಾತುಕತೆಗಳನ್ನು ನಡೆಸಿ, ಅಂತಿಮವಾಗಿ 370 ನೇ ವಿಧಿಯನ್ನು ಅಳವಡಿಸಲಾಯಿತು. ಆ ವಿಧಿಯ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಲಾಯಿತು. ಉದಾಹರಣೆಗೆ ರಾಜ್ಯವು ತನ್ನದೇ ಆದ ಸಂವಿಧಾನವನ್ನು ಹೊಂದಲು ಅವಕಾಶ ನೀಡಿತು, ಪ್ರತ್ಯೇಕ ಧ್ವಜ ಮತ್ತು ಭಾರತ ಸರ್ಕಾರದ ಸೀಮಿತ ನ್ಯಾಯವ್ಯಾಪ್ತಿಯನ್ನು ಕಲ್ಪಿಸಿತು.

ಭಾರತೀಯ ಸಂವಿಧಾನ ಆರ್ಟಿಕಲ್ 1, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಮೂಲಕ ಜಾರಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಆರ್ಟಿಕಲ್ 370(1)(ಸಿ)ನಲ್ಲಿ ತಿಳಿಸಲಾಗಿದೆ. ಆರ್ಟಿಕಲ್ 1 ಒಕ್ಕೂಟ ಎಂದು ಹೇಳುತ್ತದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಬಂಧಿಸುವ ವಿಧಿ 370 ಆಗಿದೆ. ರಾಷ್ಟ್ರಪತಿಗಳ ಆದೇಶದ ಮೂಲಕ 370 ನೇ ವಿಧಿಯನ್ನು ತೆಗೆದುಹಾಕಬಹುದಾದರೂ, ಹೊಸ ಕಾನೂನುಗಳನ್ನು ಮಾಡದ ಹೊರತು ಅದು ರಾಜ್ಯವನ್ನು ಭಾರತದಿಂದ ಸ್ವತಂತ್ರವಾಗಿರುವಂತೆ ನೋಡಿಕೊಳ್ಳುತ್ತದೆ.

370ನೇ ವಿಧಿ ರದ್ದು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ರಾಷ್ಟ್ರಪತಿ ಆದೇಶದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು 2019 ಆಗಸ್ಟ್ 5ರಂದು ರದ್ದು ಮಾಡಿತು. ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ರಾಜ್ಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಶಾಸಕಾಂಗವನ್ನು ಹೊಂದಿದ್ದರೆ, ಲಡಾಖ್ ಶಾಸಕಾಂಗವನ್ನು ಹೊಂದಿರುವುದಿಲ್ಲ.

ಅರ್ಜಿದಾರರ ವಾದವೇನು?
ಆರ್ಟಿಕಲ್ 370 ರದ್ಧತಿ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಗುರುತಿನ ಮೇಲೆ ಪ್ರಭಾರ ಬೀರಲಿದೆ. ಜೊತೆಗೆ ಈ ಪ್ರದೇಶದ ಪ್ರದೇಶದ ಸ್ವಾಯತ್ತತೆ ಮತ್ತು ಜನಸಂಖ್ಯಾ ಸಂಯೋಜನೆಗೆ ಅದರ ಸಂಭಾವ್ಯ ಪರಿಣಾಮಗಳ ಬಗ್ಗೆ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲೇ ಅರ್ಜಿದಾರರು ಆರ್ಟಿಕಲ್ 370 ರದ್ಧತಿಯು ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದರು.

ಪೂರ್ಣ ಪ್ರಮಾಣದ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರ ಸರ್ಕಾರವು ತನಗಿರುವ ಅಖಂಡ ಬಹುಮತ ಮತ್ತು ಕಾರ್ಯನಿರ್ವಾಹಕ ಆದೇಶಗಳನ್ನು ದುರುಪಯೋಗ ಮಾಡಿಕೊಂಡಿದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್, 1957ರಲ್ಲಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ, ಆರ್ಟಿಕಲ್ 370ಗೆ ಶಾಶ್ವತ ಸ್ವರೂಪವನ್ನು ಪಡೆದುಕೊಂಡಿದೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿಯೇ, ಸಂವಿಧಾನ ತಿದ್ದುಪಡಿಗೆ ಸಂಸತ್ತಿಗೆ ಅಧಿಕಾರ ನೀಡುವ ಆರ್ಟಿಕಲ್ 368 ಅನ್ನು, 370 ವಿಧಿ ರದ್ಧತಿಗೆ ಬಳಸಿದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಾದವೇನು?
ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಏಕೀಕರಣಕ್ಕೆ ಅಡ್ಡಿಪಡಿಸುತ್ತದೆ. ಈ ಪ್ರದೇಶದ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಲಾಯಿತು ಎಂದು ಕೇಂದ್ರ ಸರಕಾರವು ತನ್ನ ವಾದವನ್ನು ಮಂಡಿಸಿತು. ರದ್ಧು ನಿರ್ಧಾರವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ, ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ಮತ್ತು ಪ್ರದೇಶದಲ್ಲಿ ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಾದಿಸಲಾಯಿತು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣವಾಗಿ ಅನ್ವಯವಾಗದ ರಾಷ್ಟ್ರೀಯ ಕಾನೂನುಗಳು ಮತ್ತು ಕಾರ್ಯಕ್ರಮಗಳ ಅನ್ವಯಕ್ಕೆ ಇದು ಅನುಕೂಲವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಏಕತೆಯ ಭಾಗವಾಗಿ ಮಾಡಲು 370 ಆರ್ಟಿಕಲ್ ರದ್ದು ಅಗತ್ಯವಾಗಿತ್ತು. ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದುಕೊಂಡು ಬಳಿಕ ಅಂದರೆ, 2019ರ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಭಾಗದಲ್ಲಿ ಚುನಾವಣೆ ನಡೆಸುವುದು ಬಾಕಿ ಇದೆ. ಪರಿಸ್ಥಿತಿ ಸುಧಾರಿಸಿದ ನಂತರ ಚುನಾವಣೆಯನ್ನು ನಡೆಸಲಾಗುವುದು ಮತ್ತು ರಾಜ್ಯದ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ವಾದಿಸಿತು.