ಲಚ್ಯಾಣ (ಇಂಡಿ) : ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ. ಈತನನ್ನು ಕೊನೆಗೂ ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಹೊರ ತರಲಾಗಿದೆ.

ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಎರಡು ವರ್ಷದ ಬಾಲಕ ಕೊಳವೆ ಬಾವಿಗೆ ಬಿದ್ದಿದ್ದ.

ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ (2) ಎಂಬ ಬಾಲಕ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದ.

ಶಂಕರಪ್ಪ ಮುಜಗೊಂಡ ಎಂಬುವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದರು. 500 ಅಡಿಯಷ್ಟು ಕೊರೆದರೂ ನೀರು ಬಂದಿರಲಿಲ್ಲ. ಹಾಗಾಗಿ ಮುಚ್ಚದೇ ಹಾಗೆಯೇ ಬಿಟ್ಟಿದ್ದರು ಎನ್ನಲಾಗಿದೆ. ಅವರ ಮೊಮ್ಮಗನೇ ಈ ಕೊಳವೆ ಬಾವಿಗೆ ಬಿದ್ದಿದ್ದ.

ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ಯಶಸ್ವಿಯಾಗಿ ಜೀವಂತವಾಗಿ ಹೊರ ತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.