ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಣ್ಣ- ತಂಗಿಗೆ ಸಿಹಿ ಬದಲು ಕಹಿ ತಂದಿದೆ.

ಕರ್ನಾಟಕದ ಬಳ್ಳಾರಿ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಶ್ರೀರಾಮುಲು ಸೋಲು ಅನುಭವಿಸಿದ್ದಾರೆ. ನೆರೆಯ ಆಂಧ್ರಪ್ರದೇಶದ ಹಿಂದುಪುರ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರ ಸಹೋದರಿ ಜೆ.ಶಾಂತಾ ಸೋಲು ಕಂಡಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಅಣ್ಣ-ತಂಗಿ ಸೋಲು ಅನುಭವಿಸಿದ್ದಾರೆ.

ಶ್ರೀರಾಮುಲು ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕಾರಾಮ ವಿರುದ್ಧ 98,992 ಮತಗಳಿಂದ, ಹಿಂದೂಪುರದಲ್ಲಿ ಟಿಡಿಪಿಯ ಪಾರ್ಥಸಾರಥಿ ವಿರುದ್ಧ ಜೆ.ಶಾಂತಾ 1,32,427 ಮತಗಳ ಅಂತರದಿಂದ ಸೋತಿದ್ದಾರೆ.

ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಶಾಂತಾ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದೀಗ ಲೋಕಸಭಾ ಚುನಾವಣೆಗೆ ಆಂಧ್ರಪ್ರದೇಶದ ಹಿಂದುಪುರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಶ್ರೀರಾಮುಲು ಹಾಗೂ ಶಾಂತಾ ಅವರು ಈ ಹಿಂದೆ ಬಳ್ಳಾರಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯಿಂದ ಆಯ್ಕೆಯಾಗಿದ್ದು ಇತಿಹಾಸ.