ಬೆಳಗಾವಿ : ಹುಕ್ಕೇರಿ ತಾಲೂಕು ಹರಗಾಪುರ ಬಳಿ ಚಲಿಸುತ್ತಿದ್ದ ಖಾಸಗಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹರಗಾಪುರ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸಮಯಪ್ರಜ್ಞೆ ಮೆರೆದ ಚಾಲಕ ಬಸ್ ನಿಲ್ಲಿಸಿ ಬಸ್ಸಿನಲ್ಲಿದ್ದ 28 ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಅಷ್ಟರಲ್ಲಿ ಬೆಂಕಿ ತುಂಬಾ ಬೆಂಕಿ ಆವರಿಸಿ ಜನರ ಮುಂದೆ ಬಸ್ ಸುಟ್ಟು ಕರಕಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.