ಬೆಳಗಾವಿ : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ದಿಮೆಯನ್ನು ಸ್ಥಾಪಿಸಲು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಫೆ.26 ರ ಸಂಜೆ 5.30 ಗಂಟೆ ಒಳಗಾಗಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಕನಿಷ್ಠ 3೦ ವರ್ಷ ಗರಿಷ್ಠ 5೦ ವರ್ಷ ವಯೋಮಿತಿ ಇರಬೇಕು. ವಾರ್ಷಿಕ ಆದಾಯ 1೦ ಲಕ್ಷ ಒಳಗಿರಬೇಕು. ಕನಿಷ್ಟ 1೦ ವರ್ಷಗಳ ಕಾಲ ಸೇವಾನುಭವ ಹೊಂದಿರಬೇಕು. ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಭರ್ತಿ ಮಾಡಿದ ಅರ್ಜಿಗಳನ್ನು ನೆಹರು ನಗರ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.