ಮಂಗಳೂರು : ಇಲ್ಲಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಮಂಗಳೂರು ಉತ್ತರ ಮತ್ತು ದಕ್ಷಿಣ ವಲಯದ ಪ್ರೌಢ ಶಾಲಾ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಅ. 26 ರಂದು ನಡೆಯಿತು.
ಕಾಲೇಜಿನ ಎನ್ ಎಸ್ ಎಸ್ ಘಟಕ, ತರಬೇತಿ ಮತ್ತು ನೇಮಕಾತಿ ವಿಭಾಗ ಹಾಗೂ ಲಿಯೋ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಭಾರತಿ ಉದ್ಘಾಟಿಸಿದರು.
ಲಿಯೋ ಕ್ಲಬ್ ಸದಸ್ಯೆ ಸಮೀಕ್ಷಾ, ಲಯನ್ಸ್ ಕ್ಲಬ್ ಸದಸ್ಯ ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಡಾ. ತಾರಾನಾಥ ಅಧ್ಯಕ್ಷತೆ ವಹಿಸಿದ್ದರು.
ಎನ್ ಎಸ್ ಎಸ್ ಅಧಿಕಾರಿ ಪುಷ್ಪರಾಜ್ ಸ್ವಾಗತಿಸಿ ಡಾ. ಅಶ್ವಿನಿ ವಂದಿಸಿದರು.ವಾಮಂಜೂರಿನ ಸಂತ ಜೋಸೆಫ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ವಿನ್ಸೆಂಟ್, ಮಂಗಳೂರಿನ ಕೆಎಂಸಿ ದಂತ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕಿ ಡಾ. ನಂದಿತಾ ಹಾಗೂ ಎಸ್.ಡಿ.ಎಂ. ಕಾನೂನು ಕಾಲೇಜಿನ ಪ್ರಾಚಾರ್ಯ ಡಾ. ತಾರಾನಾಥ ಕಾರ್ಯಾಗಾರ ನಡೆಸಿಕೊಟ್ಟರು.