ಮಹಾ ಚುನಾವಣೆಯಲ್ಲಿ ಶೆಟ್ಟರ್ ಭರ್ಜರಿ ಪ್ರಚಾರ ಬೆಳಗಾವಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಬೆಳಗಾವಿ ಲೋಕಸಭಾ ಸಂಸದರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಭಾಗಿಯಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಮಹಾರಾಷ್ಟ್ರದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಸೊಲ್ಲಾಪುರ ನಗರ, ಜೇವೂರು,ಮಂಗ್ರೂಲ್ , ಗ್ರಾಮದಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳಾದ ಕಲ್ಯಾಣ ಶೆಟ್ಟಿ, ದೇವಿಂದ್ರ ಕೂಟಿ , ವಿಜಯ್ ದೇಶಮುಖ್, ಸುಭಾಷ್ ದೇಶಮುಖ್ ಅವರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ಥಳೀಯ ನಾಯಕರೊಂದಿಗೆ ಸೊಲ್ಲಾಪುರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಎನ್ ಡಿ ಎ ಸರಕಾರ ಮತ್ತೆ ಆಡಳಿತಕ್ಕೆ ಬಂದರೆ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದೆ ಎಂದು ತಿಳಿಸಿದರು. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿಜಿಯವರ ನಾಯಕತ್ವದಲ್ಲಿ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ನಮ್ಮ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳಿಂದ ವಿಜಯಶಾಲಿಯನ್ನಾಗಿ ಮಾಡಲು ಸಾರ್ವಜನಿಕರಲ್ಲಿ ಮನವಿ ಮಾಡಿ, ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಪ್ರಮುಖರಾದ ಶಾಜಿ ಪವಾರ್, ಮಹೇಶ ಸಿಂಧೋಳಿ, ಉತ್ತಮ ಗಾಯಕವಾಡ, ಅವಿನಾಶ್ ಮಡಿಕಾಂಬಿ, ದಿಲೀಪ್ ಸಿದ್ದೆ, ವಿವೇಕಾನಂದ ಉಂಬರಜಿ, ಮೋತಿರಾಮ ರಾಠೋಡ, ಸಂಜಯ ದೇಶಮುಖ, ವಿಲಾಸ್ ಗವಾನಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Read more

error: Content is protected !!