
ಹೆಬ್ರಿ: ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು.
ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಗುತ್ತಿಗೆದಾರ ವಾದಿರಾಜ ಶೆಟ್ಟಿ ಚಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ದೇಶ ಸ್ವಾತಂತ್ರ್ಯ ಸಿಕ್ಕಿದ ನಂತರ , ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ರಚನಾ ಸಮಿತಿ ರಚಿಸಿ , ಹಲವಾರು ತಿದ್ದುಪಡಿಯೊಂದಿಗೆ , ಜನವರಿ 26 , 1950 ರಂದು ಜಾರಿಗೆ ಬಂದು , ಈ ಸಂವಿದಾನದ ಅಡಿಯಲ್ಲಿ ನಮ್ಮ ದೇಶ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಮುನ್ನಡೆಯುತ್ತಿದೆ ಎಂದರು.
ಟ್ರಸ್ಟ್ ಅಧ್ಯಕ್ಷ ಸಿ ಎ ಎಂ. ರವಿ ರಾವ್, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ರಾಜೇಶ್ ನಾಯಕ್, ವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಶೈಲೇಶ್ ಕಿಣಿ , ಟ್ರಸ್ಟಿ ಬಾಲಕೃಷ್ಣ ಮಲ್ಯ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.