ಬೆಳಗಾವಿ : 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಧರ್ಮನಾಥ ಭವನದ ಹತ್ತಿರವಿರುವ ಭಾರತೀಯ ಜನತಾ ಪಾರ್ಟಿ ಗ್ರಾಮಾಂತರ ಜಿಲ್ಲಾ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.

ಮಾಜಿ ಶಾಸಕ ಸಂಜಯ ಪಾಟೀಲ, ರಾಜ್ಯ ಸಾಮಾಜಿಕ ಜಾಲತಾಣ ಸದಸ್ಯ ನಿತಿನ್ ಚೌಗಲೆ, ಮುರುಗೇಂದ್ರಗೌಡ ಪಾಟೀಲ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೋಹಿತೆ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ, ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಯಲ್ಲೇಶ್ ಕೋಲಕಾರ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಸಂತೋಷ ದೇಶನೂರ, ಡಾ.ಸೋನಾಲಿ ಸರ್ನೋಬತ್, ಗುರು ಕೋತಿನ್, ವಿಠ್ಠಲ್ ಸಾಯಣ್ಣವರ, ವೀರಭದ್ರ ಪೂಜೇರಿ ಹಾಗೂ ಅನೇಕರು ಉಪಸ್ಥಿತರಿದ್ದರು