ಬೆಂಗಳೂರು :
ವಿಧಾನಸಭಾ ಸದಸ್ಯರನ್ನು ಶಾಸಕರೆಂದು ಸಂಭೋದಿಸುವ ರೀತಿಯಲ್ಲಿ ಇನ್ನು ಮುಂದೆ ವಿಧಾನಪರಿಷತ್ ಸದಸ್ಯರನ್ನು ಶಾಸಕರೆಂದೇ ಸಂಭೋದಿಸುವುದರ ಜೊತೆಗೆ ಸರಕಾರದ ಆಮಂತ್ರಣ ಪತ್ರಿಕೆಗಳಲ್ಲೂ ಇದೇ ರೀತಿ ಶಿಷ್ಟಾಚಾರ ಪಾಲಿಸುವಂತೆ ನಿರ್ದೇಶನ ನೀಡಲು ಸಭಾಪತಿ ಬಸವರಾಜ ಹೊರಟ್ಟಿ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.

ಮೇಲ್ಮನೆ ಸದಸ್ಯರ ಬಗ್ಗೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ವರ್ಗದವರು ತಾರತಮ್ಯದಿಂದ ಕಾಣುತ್ತಿರುವ ಬಗ್ಗೆ ಇತ್ತೀಚಿಗೆ ಬೆಳಗಾವಿ ಅಧಿವೇಶನದಲ್ಲಿ ಹಲವು ಸದಸ್ಯರು ಧ್ವನಿಯೆತ್ತಿದ್ದರು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಲಿಖಿತ ಮೂಲಕ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಅವರು ಸೂಚನೆ ನೀಡಿದ್ದಾರೆ.