ಬೆಂಗಳೂರು: ಚಾಮರಾಜನಗರ ಸಂಸದ, ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್‌ (76) ಇಂದು ನಿಧನರಾದರು. ಕೆಲ ದಿನಗಳಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ಬಹು ಅಂಗಾಂಗ ವೈಫಲ್ಯ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್‌ ಅವರು ಹಲವು ದಿನಗಳಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಧಿಕ ರಕ್ತದೊತ್ತಡ, ಶುಗರ್‌ ಪ್ರಮಾಣದಲ್ಲಿ ಶನಿವಾರ ಭಾರಿ ಏರುಪೇರಾದ ಕಾರಣ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೇ ಕಾರಣಕ್ಕಾಗಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.