ಬೆಳಗಾವಿ : ಚಿಕ್ಕೋಡಿಯಲ್ಲಿ ಈ ಬಾರಿ ಬಿಜೆಪಿ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ಇನ್ನಷ್ಟೇ ಟಿಕೆಟ್ ಘೋಷಣೆ ಮಾಡಬೇಕಾಗಿದೆ.

ರಾಜ್ಯದ ಪ್ರಭಾವಿ ಸಚಿವರಲ್ಲಿ ಒಬ್ಬರಾಗಿರುವ ಸತೀಶ ಜಾರಕಿಹೊಳಿ ಅವರ ಸುಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕಾಂಗ್ರೆಸ್ ಪಕ್ಷ ಇಷ್ಟರಲ್ಲೇ ಟಿಕೆಟ್ ಘೋಷಣೆ ಮಾಡಲಿದ್ದು ಸತೀಶ ಜಾರಕಿಹೊಳಿ ಈಗಾಗಲೇ ರಣಾಂಗಣ ಪ್ರವೇಶ ಮಾಡಿದ್ದಾರೆ. ಎಂದಿನಂತೆ ಸದ್ದಿಲ್ಲದೆ ತಮ್ಮ ಚುನಾವಣಾ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ ಕತ್ತಿ ಅವರನ್ನು ಸೆಳೆಯಲು ಕಾಂಗ್ರೆಸ್ ತೆರೆಮರೆಯಲ್ಲಿ ಸಿದ್ಧತೆ ನಡೆಸಿದೆ.

ಒಟ್ಟಾರೆ ಪ್ರತಿಷ್ಠಿತ ಕ್ಷೇತ್ರದಲ್ಲಿ ಗೆದ್ದು ರಾಜ್ಯ ರಾಜಕಾರಣದಲ್ಲಿ ತಮ್ಮ ವರ್ಚಸ್ಸನ್ನು ಇನ್ನಷ್ಟು ಬೀರಲು ಸಚಿವ ಸತೀಶ ಜಾರಕಿಹೊಳಿ ಮುಂದಾಗಿದ್ದು ಈ ಸಲದ ಚುನಾವಣೆ ಚಿಕ್ಕೋಡಿ ಮತಕ್ಷೇತ್ರದಲ್ಲಿ ತೀವ್ರ ಕುತೂಹಲ ಹಾಗೂ ಸಂಚಲನಕ್ಕೆ ಕಾರಣವಾಗಿದೆ.