ಬೆಂಗಳೂರು: ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣ ಇರಲಿದೆ. ಕರಾವಳಿಯ ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಚದುರಿದಂತೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಾವುದೇ ಮಳೆಯಾಗುವ ಮುನ್ಸೂಚನೆ ಇಲ್ಲ. ಬದಲಿಗೆ ಶುಷ್ಕ ವಾತಾವರಣ ಇರಲಿದೆ. ಬೆಂಗಳೂರಿನ ವಾತಾವರಣದಲ್ಲಿ ಯಾವುದೇ ಗಮರ್ನಾಹ ಬದಲಾವಣೆ ಇಲ್ಲ.

ತಾಪಮಾನ ಮುನ್ಸೂಚನೆ
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣ ಇರಲಿದೆ. ಕೆಲವೊಮ್ಮೆ ತಾಪಮಾನದಲ್ಲೂ ಏರಿತ ಉಂಟಾಗಲಿದ್ದು, ಬಿಸಿಲ ಧಗೆ ಹೆಚ್ಚಾಗಿ ಇರಲಿದೆ.

ಗಾಳಿ ವೇಗದ ಎಚ್ಚರಿಕೆ
ಏಪ್ರಿಲ್ 18 ಮತ್ತು 19 ರಂದು ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಮೇಲ್ಮೈ ಗಾಳಿ 30-40 ಕಿ.ಮೀ ತಲುಪುವ ಸಾಧ್ಯತೆಯಿದೆ.