ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸಮುದಾಯ ಭವನ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಪೂಜೆ ನೆರವೇರಿಸಿದರು.

ಜೊತೆಗೆ, ಕಟ್ಟಡ ಕಾಮಗಾರಿಗಳ ಪ್ರಗತಿ ಪರಿಶೀಲನೆಯವನ್ನು ಸಹ ನಡೆಸಿದರು.

ಈ ಸಂದರ್ಭದಲ್ಲಿ ಪ್ರಕಾಶ ಪಾಟೀಲ, ಶ್ರೀಶೈಲಗೌಡ ಪಾಟೀಲ, ಸುರೇಶ ಪಾಟೀಲ, ಬಾಳು ಕುರಂಗಿ, ಬಸು ಕೋಲಕಾರ್, ಯಲ್ಲಪ್ಪ ತೋರ್ಲಿ, ವಿಜಯ ಪಾಟೀಲ, ಲಿಂಗನಗೌಡ ಪಾಟೀಲ, ಮಂಜು ಕೋಲಕಾರ್ ಉಪಸ್ಥಿತರಿದ್ದರು.