ಹಿರೆಬಾಗೇವಾಡಿ:ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು.
ನಾಡಿನ ಸುಭಿಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು.
ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
ಭೋಜನಾಲಯ ಉದ್ಘಾಟಿಸಿದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
ಹಿರೇಬಾಗೇವಾಡಿ : ಹಿರೇಬಾಗೇವಾಡಿಯ ಗಾಂಧಿನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಭೋಜನಾಲಯ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಉದ್ಘಾಟಿಸಿದರು.
ಇದೇ ಸಮಯದಲ್ಲಿ ಶಾಲೆಯ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದ ಅವರು, ಸ್ಮಾರ್ಟ್ ಕ್ಲಾಸ್ ಕೊಠಡಿ ಹಾಗೂ ಅಗತ್ಯವಿರುವ ಸೌರ್ಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು.
ಈ ಸಮಯದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಸಿ ಪಾಟೀಲ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ನಾಯ್ಕರ್, ಸರ್ವಸದಸ್ಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು, ಸುರೇಶ್ ಇಟಗಿ, ಗೌಸಮೊದ್ದಿನ್ ಜಾಲಿಕೊಪ್ಪ, ಅನಿಲ ಪಾಟೀಲ, ಅಡಿವೇಶ್ ಇಟಗಿ, ರಾಜಣ್ಣ ಪಾಟೀಲ, ಅಬ್ದುಲ್ ಖತೀಬ್, ಶಿಪು ಹಳೇಮನಿ, ಪ್ರಕಾಶ ಜಪ್ತಿ, ಗಂಗಾಧರ್ ಅಗಸಿಮನಿ, ಮಹಾಂತೇಶ್ ಹಂಚಿನಮನಿ, ನಿಂಗಪ್ಪ ತಳವಾರ, ಆನಂದ ಪಾಟೀಲ, ಅಡಿವೆಪ್ಪ ತೋಟಗಿ, ಆನಂದ ಪಾಟೀಲ, ರಘು ಪಾಟೀಲ ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.