ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಲ್ಲಿಯ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಆಯೋಜಿಸಿರುವ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ಸಿಂಧನೂರು ದಸರಾ ಮಹೋತ್ಸವದಲ್ಲಿ ಎಲ್ಲ ಜಾತಿ ಧರ್ಮವರು ಭಾಗವಹಿಸಿರುವುದು ಸಂತಸ ತಂದಿದೆ. ಎರಡು ಕಿ.ಮೀ ಸೌಹಾರ್ದ ನಡೆಗೆಯನ್ನು ಮಾಡಿದ್ದಾರೆ. ಸೌಹಾರ್ದ ಹಾಗೂ ಪ್ರೀತಿ ಗೌರವದಿಂದ ಬದುಕುವುದು ಅಗತ್ಯ ಎಂದು ಹೇಳಿದರು.
ದಸರಾ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾದ ವೈಭವ ಅಲ್ಲ: ಇದು ಸರ್ವ ಜನಾಂಗದ ಸಂಭ್ರಮದ ಹಬ್ಬ:
ಅಂಬಾ ದೇವಿ ಕೂಡ ಚಾಮುಂಡೇಶ್ವರಿಯ ಅವತಾರ:
ಕಲ್ಯಾಣ ಕರ್ನಟಕದಲ್ಲಿ ಖಾಲಿ ಇದ್ದ 109000 ಹುದ್ದೆಗಳಲ್ಲಿ 79000 ಹುದ್ದೆ ಭರ್ತಿ ಮಾಡಿದ್ದೇವೆ. ಉಳಿದದ್ದನ್ನು ಕೂಡ ಭರ್ತಿ ಮಾಡಲಾಗುವುದು: ಸಿಎಂ ಘೋಷಣೆಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇದ್ದ 109000 ಹುದ್ದೆಗಳಲ್ಲಿ 79000 ಹುದ್ದೆ ಭರ್ತಿ ಮಾಡಿದ್ದೇವೆ. ಉಳಿದದ್ದನ್ನು ಕೂಡ ಭರ್ತಿ ಮಾಡಲಾಗುವುದು
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.ಮೊಟ್ಟ ಮೊದಲ ಬಾರಿಗೆ ಆರಂಭಿಸಲಾದ ವೈಭವದ ಸಿಂಧನೂರು ದಸರಾ ಉತ್ಸವವನ್ನು ಉದ್ಘಾಟಿಸಿ, ಮುಖ್ಯವೇದಿಕೆಯಲ್ಲಿ 1695.85 ಕೋಟಿ ವೆಚ್ಚದ ರಾಯಚೂರು ಕಲ್ಮಲಾ ಜಂಕ್ಷನ್ ನಿಂದ ಸಿಂಧನೂರು ಬಳಿ ಬಳ್ಳಾರಿ- ಲಿಂಗಸಗೂರು ರಸ್ತೆ ವರೆಗಿನ 78.45 ಕಿಮೀ ಉದ್ದದ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದರು.
ದಸರಾ ಯಾವುದೇ ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತವಾದ ವೈಭವ ಅಲ್ಲ: ಇದು ಸರ್ವ ಜನಾಂಗದ ಸಂಭ್ರಮದ ಹಬ್ಬ. ಅಂಬಾ ದೇವಿ ಕೂಡ ಚಾಮುಂಡೇಶ್ವರಿಯ ಅವತಾರ. ಇದು ಸಾಂಸ್ಕೃತಿಕ ಹಿರಿಮೆ ಮತ್ತು ಚರಿತ್ರೆಯನ್ನು ಸಾರುವ ಹಬ್ಬ ಎಂದರು.
ತಾಯಿ ಅಂಬಾದೇವಿ ಮತ್ತು ಚಾಮುಂಡಿ ತಾಯಿಯ ಕೃಪೆಯಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿದೆ. ಜಲಾಶಯ, ಕೆರೆ ಕಟ್ಟೆಗಳು ತುಂಬಿವೆ. ಹೀಗಾಗಿ ಈ ಬಾರಿ ಸಮೃದ್ಧಿ ಕಾಣಲಿದ್ದೇವೆ ಎನ್ನುವ ನಂಬಿಕೆ ನನಗಿದೆ ಎಂದರು.
371 ಜೆ ಜಾರಿಗಾಗಿ ಕಲ್ಯಾಣ ಕರ್ನಾಟಕದ ಎಲ್ಲ ಜಾತಿ, ಧರ್ಮದ ಮಂದಿ ಒಟ್ಟಾಗಿ ಹೋರಾಟ ನಡೆಸಿದರು. ಈ ಜನ ಹೋರಾಟದ ಬೆನ್ನಿಗೆ ನಿಂತು ಮಲ್ಲಿಕಾರ್ಜುನ ಖರ್ಗೆ ಅವರು 371 ಜೆ ಜಾರಿ ಮಾಡಿಸಿದರು ಎಂದು ವಿವರಿಸಿದರು.
371 ಜೆ ಜಾರಿಯಾಗಿ ದಶಮಾನೋತ್ಸವ ಪ್ರಯುಕ್ತ ನಾವು ಕಲ್ಬುರ್ಗಿಯಲ್ಲಿ ವಿಶೇಷ ಕ್ಯಾಬಿನೆಟ್ ನಡೆಸಿ ಅದೊಂದೇ ದಿನ 11770 ಕೋಟಿ ಯೋಜನೆಗಳಿಗೆ ಮಂಜೂರಾತಿ ನೀಡಿದ್ದೇವೆ ಎಂದು ಮುಖ್ಯಮಂತ್ರಿಗಳು ವಿವರಿಸುತ್ತಿದ್ದಂತೆ ನೆರೆದಿದ್ದ ಜನತೆ ಜೋರು ಚಪ್ಪಾಳೆಯ ಜೊತೆಗೆ ಸ್ವಾಗತಿಸಿದರು.
ನಾನು ಬಜೆಟ್ ನಲ್ಲಿ ಕಳೆದ ವರ್ಷ 3000 ಕೋಟಿ, ಈ ವರ್ಷ 5000 ಕೋಟಿಯನ್ನು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಘೋಷಿಸಿದ್ದೇನೆ. ಪ್ರಾದೇಶಿಕ ಅಸಮಾನತೆ ಸರಿದೂಗಿಸುವ ಕಾರಣಕ್ಕೆ
ಕಲ್ಯಾಣ ಕರ್ನಟಕದಲ್ಲಿ ಖಾಲಿ ಇದ್ದ 109000 ಹುದ್ದೆಗಳಲ್ಲಿ 79000 ಹುದ್ದೆ ಭರ್ತಿ ಮಾಡಿದ್ದೇವೆ. ಉಳಿದದ್ದನ್ನು ಕೂಡ ಭರ್ತಿ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದ ಸಿಎಂ ಸಿದ್ದರಾಮಯ್ಯ ಅವರು, ಇದೆಲ್ಲಾ ಸಾಧ್ಯವಾಗಿದ್ದು 371 ಜೆ ಯಿಂದ. ಇದನ್ನು ಜಾರಿಗೆ ಸಹಕರಿಸಿದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ನಾವೆಲ್ಲಾ ಸ್ಮರಿಸಬೇಕು ಎಂದರು.
*ಮತೆ ಇದೆಂಗಾಯ್ತು ಹೇಳ್ರಪಾ: BJP ಗೆ ಸಿಎಂ ವ್ಯಂಗ್ಯ
ಗ್ಯಾರಂಟಿಗಳಿಂದಾಗಿ ಬೇರೆ ಅಭಿವೃದ್ಧಿಗೆ ಹಣ ಇಲ್ಲ, ಹಣ ಇಲ್ಲ ಅಂತ BJP ಅಪಪ್ರಚಾರ ಮಾಡ್ತಿದಾರಲ್ಲಾ ಹಾಗಿದ್ರೆ ಈಗ ಉದ್ಘಾಟಿಸಿದ 1695 ಕೋಟಿ ಹಣ ಎಲ್ಲಿಂದ ಬಂತು? ಒಂದೇ ವಿಶೇಷ ಕ್ಯಾಬಿನೆಟ್ ನಲ್ಲಿ 11770 ಕೋಟಿ ಕಾಮಗಾರಿಗೆ ಅನುಮೋದನೆ ಕೊಟ್ವಲ್ಲಾ, ಇದೆಲ್ಲಾ ಹೇಗಾಯ್ತು ಹೇಳ್ರಪಾ ಎಂದು ವ್ಯಂಗ್ಯವಾಗಿ BJP ಯನ್ನು ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371 ಜೆ ಜಾರಿಗೆ ಆಗ್ರಹಿಸಿ ಹೋರಾಟ ಸಂಘಟಿಸಿದ ಎಲ್ಲಾ ಜಾತಿ, ಧರ್ಮಗಳ ಹಿರಿಯ ಹೋರಾಟಗಾರರನ್ನು ಇದೇ ದಸರಾ ವೇದಿಕೆಯಲ್ಲಿ ಸನ್ಮಾನಿಸಿದ ಬಳಿಕ 371 ಜೆ ಸೃಷ್ಟಿಸಿದ ಅವಕಾಶದಲ್ಲಿ ಪ್ರಮುಖ ಹುದ್ದೆಗಳನ್ನು ಪಡೆದುಕೊಂಡ ಸಿಂಧನೂರಿನ 10 ಮಂದಿಯನ್ನು ಸನ್ಮಾನಿಸಲಾಯಿತು.
ಕೊಪ್ಪಳ : ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗಿಣಿಗೇರ ಏರ್ ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಾತಿ ಗಣತಿ ಜಾರಿ ಮಾಡುವ ಬಗ್ಗೆ ಶಾಸಕ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಯರೆಡ್ಡಿಯವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮುಂದಿನ ವಾರ ಹಿಂದುಳಿದ ವರ್ಗಗಳ ಇಲಾಖಾ ಸಚಿವರ ಜೊತೆ ಚರ್ಚೆ ನಡೆಸುವುದಾಗಿ ತಿಳಿಸಿದರು.
ಒಳಮೀಸಲಾತಿ ಜಾರಿ ತರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ , ಒಳಮೀಸಲಾತಿ ಜಾರಿಯ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಆದೇಶ ನೀಡಿದೆ. ಈ ಸಂಬಂಧ ಸಚಿವ ಸಂಪುಟದಲ್ಲಿ ಹಾಗೂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗುವುದು ಎಂದರು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡು, ಸಿದ್ದರಾಮಯ್ಯನವರ ಪರವಾಗಿ ಬ್ಯಾಟಿಂಗ್ ಮಾಡಿದ ಬಗ್ಗೆ ಕುಮಾರಸ್ವಾಮಿಯವರು ಟೀಕೆ ಮಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಜಿ.ಟಿ.ದೇವೇಗೌಡರು ಅವರು ಜೆಡೆಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾಗಿದ್ದು,ಹೇಳಿಕೆ ಸರಿಯಾಗಿಯೇ ಇರುತ್ತದೆ. ಭಾಜಪ ಮತ್ತು ಜೆಡಿಎಸ್ ನವರಿಗೆ ನಾನು ಅಧಿಕಾರದಲ್ಲಿದ್ದರೆ , ಅವರ ಪಕ್ಷಗಳು ದುರ್ಬಲವಾಗುವ ಭಯ ಅವರನ್ನು ಕಾಡುತ್ತಿದೆ ಎಂದರು.
ಸಚಿವ ಸತೀಶ ಜಾರಕಿಹೊಳಿಯವರು ಪಕ್ಷದ ವರಿಷ್ಠರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಐಸಿಸಿ ಅಧ್ಯಕ್ಷರಾಗಿರುವ ಖರ್ಗೆಯವರನ್ನು ಪಕ್ಷದಲ್ಲಿ ಸಚಿವರಾಗಿರುವ ಸತೀಶ್ ಜಾರಕಿಹೊಳಿಯವರು ಭೇಟಿಯಾಗುವುದು ತಪ್ಪೇನಲ್ಲ. ಇಲ್ಲಸಲ್ಲದ ಊಹಾಪೋಹಗಳಿಗೆ ಅವಕಾಶ ನೀಡಬಾರದು ಎಂದರು.