ಬೆಂಗಳೂರು : ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ಉರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್, ಬಿಜುವಾಡ ವಿಲ್ಸನ್ , ಮೇಧಾ ಪಾಟ್ಕರ್ ಮುಂತಾದ ಅನೇಕ ಚಿಂತಕರು ಮೇಧಾವಿಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ. ದೇಶದ ಸಮಸ್ಯೆಗಳು, ಜನರ ಬವಣೆಗಳು, ಸಂವಿಧಾನದಲ್ಲಿ ಅದಕ್ಕೆ ಪರಿಹಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. 24 ರಂದು ಉದ್ಘಾಟನೆ ನಡೆದು 25 ರಂದು ಬೃಹತ್ ರ್ಯಾಲಿ ನಡೆಯಲಿದೆ. ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪಿಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ರಚನೆಯಾದ ನಂತರ ಮೊದಲನೇ ಬಾರಿಗೆ ಬಜೆಟ್ ಪುಸ್ತಕದ ಮುಖಪುಟದಲ್ಲಿ ಪೀಠಿಕೆಯನ್ನು ಮುದ್ರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ಜಾಗೃತಿ ಮೂಡಬೇಕು*
ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಯಬೇಕು. ಪ್ರತಿಯೊಬ್ಬ ನಾಗರಿಕನಿಗೂ ಇದು ಅರ್ಥವಾಗದಿದ್ದರೆ, ಹಕ್ಕುಗಳ ಪರವಾಗಿ ಹೋರಾಟ ಮಾಡಲು ತಿಳಿಯಬೇಕು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮಂತ್ರಗಳನ್ನು ನೀಡಿದ್ದಾರೆ. ಹೋರಾಟ ಇಲ್ಲದೇ ಸಂವಿಧಾನದಲ್ಲಿ ಹೇಳಿರುವ ಅನೇಕ ಹಕ್ಕುಗಳು ನಮಗೆ ದಕ್ಕುತ್ತಿರಲಿಲ್ಲ. ಸ್ವಾತಂತ್ರ್ಯ ಬಂದು 77 ವರ್ಷಗಳಾಯಿತು. ಸಂವಿಧಾನ ಜಾರಿಯಾಗಿ 75 ನೇ ವರ್ಷವಾದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. ಸಂವಿಧಾನ ಜಾರಿ ಬಂದ ಸಂದರ್ಭದಲ್ಲಿ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು. ದೇಶದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಅಸಮಾನತೆ ಇದೆ. ಇಷ್ಟು ವರ್ಷಗಳಾದರೂ ಅಸಮಾನತೆ ನಮ್ಮ ದೇಶದಿಂದ ಹೋಗಿಲ್ಲ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಆರ್ಥಿಕ, ಸಾಮಾಜಿಕ, ಸಮಾನತೆಯನ್ನು ಸಂವಿಧಾನ ಕೊಟ್ಟಿದ್ದರೂ ನಮಗ್ಯಾಕೆ ಸಿಕ್ಕಿಲ್ಲ ಎಂಬ ಜಾಗೃತಿ ಮೂಡಬೇಕು. ಕೊಟ್ಟಿಲ್ಲ ಎಂದು ಸುಮ್ಮನೆ ಕುಳಿತುಕೊಳ್ಳಬಾರದು. ಅದಕ್ಕಾಗಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

*ಜನರಿಗೆ ಸಂವಿಧಾನದ ಅರಿವು ಮೂಡಿಸುವ ಉದ್ದೇಶ:*

ನಮ್ಮ ದೇಶದಲ್ಲಿ ಕಾನೂನಿನ ಅರಿವು ಕಡಿಮೆಯಿದೆ. ಬಹಳ ಜನರು ಸಂವಿಧಾನದ ಬಗ್ಗೆ ತಿಳಿದಿಲ್ಲ. ದೇಶದ ಪ್ರತಿ ನಾಗರಿಕನಿಗೂ ನಮ್ಮ ಸಂವಿಧಾನದ ಬಗ್ಗೆ ತಿಳಿದಿರಬೇಕು. ಸಂವಿಧಾನ ನೀಡಿರುವ ಹಕ್ಕುಗಳು, ಅವುಗಳು ಸರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆಯೇ ಎಂದು ಎಲ್ಲರಿಗೂ ತಿಳಿಯುವ ಸಲುವಾಗಿ ಸಮಾವೇಶವನ್ನು ಆಯೋಜಿಸುತ್ತಿರುವುದಾಗಿ ತಿಳಿಸಬೇಕಿದೆ. ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ , ಗೌರವವಿಲ್ಲ. ಆದ್ದರಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

*ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಭೋದಿಸುವ ಸಂವಿಧಾನ:*

ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕಾದ್ದು ಸರ್ಕಾರಗಳ ಕರ್ತವ್ಯ. ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಸಂವಿಧಾನ ತಿಳಿಸುತ್ತದೆ, ಆದರೆ ಅದು ಪಾಲನೆಯಾಗುತ್ತಿದೆಯೇ? ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಿಜವಾಗಲೂ ಆಗುತ್ತಿದೆಯೇ? ಸಾಮಾಜಿಕ ನ್ಯಾಯ ಮತ್ತು ಅವಾಕಶಗಳನ್ನು ಪಡೆಯಲು ಜನರು ಪ್ರಯತ್ನಿಸಲು ಜಾಗೃತಿ ಮೂಡಿಸಲು ಫೆಬ್ರವರಿ 24 ಮತ್ತು 25 ರಂದು ಎರಡು ಭಾರತ ಸಂವಿಧನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು

*ಸಂವಿಧಾನ ಅರಿವು ಮೂಡಿಸುವಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ :*

ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ ಇದ್ದರೆ, ಯಾರು ನಮ್ಮನ್ನು ದಾರಿತಪ್ಪಿಸಲು ಸಾಧ್ಯವಿಲ್ಲ. ಸುಮಾರು 78% ರಷ್ಟು ಜನರು ಶಿಕ್ಷಣ ಪಡೆದಿದ್ದಾರೆ. ವಿದ್ಯಾವಂತರು ಇಂದಿಗೂ ಮೌಢ್ಯ ಕಂದಾಚಾರವನ್ನು ನಂಬುತ್ತಿದ್ದಾರೆ. ನಮ್ಮಲ್ಲಿ ವೈಚಾರಿಕತೆಯ ಬಗ್ಗೆ ಜ್ಞಾನವಿಲ್ಲ. ಸರಿತಪ್ಪುಗಳ ಬಗ್ಗೆ ಅರಿಯಲೆಂದೇ ಶಿಕ್ಷಣ ಪಡೆಯುವುದು ಎಂದರು.

ಸಚಿವ ಡಾ: ಹೆಚ್.ಸಿ ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು