ಬೆಳಗಾವಿ :
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10:30 ಕ್ಕೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ಅವರು ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಆಗಮಿಸಲಿದ್ದಾರೆ.
ಮಧ್ಯಾಹ್ನ 11:45 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಅವರು 12.15 ಕ್ಕೆ ಬೈಲಹೊಂಗಲ ತಾಲೂಕು ಸಂಗೊಳ್ಳಿ ಗ್ರಾಮಕ್ಕೆ ತೆರಳಲಿದ್ದಾರೆ. ಅಲ್ಲಿ ಅವರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ ಮತ್ತು ಭೋಜನಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಂಗೊಳ್ಳಿ ಗ್ರಾಮದಲ್ಲಿ ಆನ್ಲೈನ್ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೂತನ ಮುಖ್ಯ ಎಂಜಿನಿಯರ್ ಕಟ್ಟಡ ಉದ್ಘಾಟನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
3:45ಕ್ಕೆ ಬೆಳಗಾವಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಹೋಟೆಲ್ ಸಂಕಮ್
ಸಭಾಗ್ರಹದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸುವರು. ನಂತರ ಅವರು 4.30 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಮುಖ್ಯಮಂತ್ರಿ ಅವರ ಅಧಿಕೃತ ಪ್ರಕಟಣೆ ತಿಳಿಸಿದೆ.