ಚಿಕ್ಕಮಗಳೂರು:ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಶುಕ್ರವಾರ ಅವರ ಸ್ವಕ್ಷೇತ್ರ ಚಿಕ್ಕಮಗಳೂರು ನಗರ ಬಂದ್‌ಗೆ ಬಿಜೆಪಿ ಕರೆ ನೀಡಿದೆ. ಈ ನಡುವೆ ಶಾಸಕ ಸಿ.ಟಿ. ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಗುರುವಾರ ಬಿಜೆಪಿ ಕಾರ್ಯ ಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.