ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಯ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಲಯಕ್ಕೆ ಸೋಮವಾರ ಸುಮಾರು 483 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ಏಪ್ರಿಲ್ 18ರಂದು ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಭೀಕರವಾಗಿ ಹತ್ಯೆಯಾಗಿತ್ತು. ನೇಹಾಳ ಹಳೆಯ ಸಹಪಾಠಿಯಾಗಿದ್ದ ಫಯಾಜ್ ಎಂಬಾತ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ್ದ. ಕೊಲೆಯಾದ ನೇಹಾಳು ಫಯಾಜನ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಾಗಿದ್ದ ಆತ ಆಕ್ರೋಶಗೊಂಡು ಹಳೆ ಸಹಪಾಠಿಯನ್ನು ಕೊಲೆ ಮಾಡಿದ್ದಾಗಿ ಪೊಲೀಸರ ವಿಚಾರಣೆ ವೇಳೆ ಬಾಯಿಬಿಟ್ಟಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಹೋರಾಟ ನಡೆದಿತ್ತು. ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸೋಮವಾರ ಸಿಐಡಿ ಪೋಲೀಸರು 483 ಪುಟಗಳಷ್ಟು ದೋಷರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.