ಬೆಂಗಳೂರು :
ಕಥೆಯ ಎಳೆಯ ಬಗ್ಗೆ ಕೌತುಕ ಮೂಡುವ ರೀತಿಯಲ್ಲಿ ‘ಕರಾವಳಿ’ ಟೀಸರ್ ಮೂಡಿಬಂದಿದೆ. ಕೋಣದ ಮೇಲೆ ಕುಳಿತಿರುವ ಪ್ರಜ್ವಲ್ ದೇವರಾಜ್ ಅವರ ಫಸ್ಟ್ ಲುಕ್ ಗಮನ ಸೆಳೆಯುತ್ತಿದೆ. ಗುರುದತ್ತ ನಿರ್ದೇಶನದ ಈ ಸಿನಿಮಾಗೆ ಶೀಘ್ರದಲ್ಲೇ ಚಿತ್ರೀಕರಣ ಆರಂಭ ಆಗಲಿದೆ.

ನಿರ್ದೇಶಕ ಗುರುದತ್ ಗಾಣಿಗ ಅವರ ಕಾಂಬಿನೇಷನ್‌ನಲ್ಲಿ ಮೂಡಿಬರುತ್ತಿರುವ ಹೊಸ
ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಗಿದೆ.

ರೋಚಕವಾದ ಟೀಸರ್ ಮೂಲಕ ಟೈಟಲ್ ಏನು ?

ಈ ಸಿನಿಮಾಗೆ ಕರಾವಳಿ ಎಂದು ಹೆಸರು ಇಡಲಾಗಿದೆ. ಶೀರ್ಷಿಕೆಗೆ ತಕ್ಕಂತೆಯೇ ಸಿನಿಮಾದಲ್ಲಿ ಕರಾವಳಿಯ ಸಂಸ್ಕೃತಿಯನ್ನು
ತೋರಿಸಲಾಗುತ್ತದೆ. ಕಂಬಳದ ಕಹಾನಿ ಇದರಲ್ಲಿ ಇರಲಿದೆ. ಅದಕ್ಕೆ ಸಾಕ್ಷಿ ಒದಗಿಸುವಂತೆ ಈ ಟೀಸರ್
ಮೂಡಿಬಂದಿದೆ. ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳಿಂದ ಈ
ಟೀಸರ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

 

ಕರಾವಳಿ ಟೀಸರ್ ಔಟ್ :

ಟೀಸರ್ ಮೂಲಕ ಸದ್ದು ಮಾಡುತ್ತಿರುವ ‘ಕರಾವಳಿ’ ಈ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಶೂಟಿಂಗ್‌ಗೆ ಹೊರಡಲಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

 

ಕರಾವಳಿ ಭಾಗದ ಸಂಸ್ಕೃತಿ ಸಾರುವ ಮತ್ತೊಂದು ಸಿನಿಮಾ ಈಗ ಸದ್ದು ಮಾಡುತ್ತಿದೆ. ‘ಕರಾವಳಿ’ ಹೆಸರಿನಲ್ಲೇ ಹೊಸ ಸಿನಿಮಾ ಘೋಷಣೆಯಾಗಿದ್ದು ಸದ್ಯ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಆಗಿದೆ.

ವಿಶೇಷ ಎಂದರೆ ಕರಾವಳಿ ಭಾಗದ ಬಗ್ಗೆಯೇ ಇರುವ ಈ ಸಿನಿಮಾದ ಟೀಸರ್ ಅ ಮಂಗಳೂರಿನಲ್ಲಿ ಅದ್ಧೂರಿಯಾಗಿ ಲಾಂಚ್ ಮಾಡಲಾಯಿತು.

‘ಕರಾವಳಿ’ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ ಸಿನಿಮಾ. ಚಿತ್ರಕ್ಕೆ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದು.

ಸದ್ಯ ರಿಲೀಸ್ ಆಗಿರುವ ಟೀಸರ್‌ನಲ್ಲಿ ಜಗತ್ತಿಗೆ ಎಂಟ್ರಿ ಕೊಡುವ ಎರಡು ಹೊಸ ಜೀವಗಳನ್ನು ನೋಡಬಹುದು. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜತೆಗೆಯೇ ಕೋಣ ಕೂಡ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಈ ಟೀಸರ್ ನೋಡುತ್ತಿದ್ದರೆ ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಬಗ್ಗೆ ಇರುವ ಸಿನಿಮಾ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಯಕ್ಷಗಾನದ ಧ್ವನಿ ಟೀಸರ್‌ನ ತೂಕವನ್ನು ಹೆಚ್ಚಿಸುವ ಜೊತೆಗೆ ಕುತೂಹಲವುಂಟು ಮಾಡಿದೆ.

ಕರಾವಳಿ ಭಾಗದ ಸಂಸ್ಕೃತಿ, ದೈವ, ಯಕ್ಷಗಾನ ಮುಖ್ಯವಾಗಿ ಕಂಬಳ ಸೇರಿದಂತೆ ಅಲ್ಲಿನ ಆಚಾರ ವಿಚಾರ ಎಲ್ಲವನ್ನು ಈ ಸಿನಿಮಾದಲ್ಲಿ ನೋಡುವ ಕಾತರದಲ್ಲಿದ್ದಾರೆ ಅಭಿಮಾನಿಗಳು. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್ ಅವರ ಛಾಯಾಗ್ರಹಣ ಇದೆ.

 

ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ನೋಡಿದರೆ ಇದುವರೆಗೂ ಅವರು ಮಾಡಿರುವ ಪಾತ್ರಗಳಲ್ಲಿಯೇ ಅತ್ಯಂತ ವಿಭಿನ್ನವಾಗಿದೆ. ಟೀಸರ್ ನೋಡಿದರೆ ಪ್ರಜ್ವಲ್ 40ನೇ ಸಿನಿಮಾ ತುಂಬಾ ವಿಶೇಷವಾಗಿ ಮೂಡಿ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುದರಲ್ಲಿ ಎರಡು ಮಾತಿಲ್ಲ.