This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ರಾಜ್ಯದ ಶಾಲೆಗಳಲ್ಲಿ ಸಂವಿಧಾನ ದಿನ ಆಚರಣೆ ಕುರಿತು ಸುತ್ತೋಲೆ

Join The Telegram Join The WhatsApp

ಬೆಂಗಳೂರು-

ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ನವೆಂಬರ್ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು ‘ಭಾರತ ಸಂವಿಧಾನ’ವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ.

26.11.2022 ‘ಸಂವಿಧಾನ ದಿನಾಚರಣೆ’ ಅಂಗವಾಗಿ ಶಾಲೆಯಲ್ಲಿ ಹಲವು ಚಟುವಟಿಕೆಗಳನ್ನು ಶಾಲಾ ಮುಖ್ಯಸ್ಥರು ಹಮ್ಮಿಕೊಳ್ಳಲು ಕ್ರಮವಹಿಸಲು ಸೂಚಿಸಿದೆ. ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು ಇತ್ಯಾದಿ ಕಾರ್ಯಕ್ರಮವನ್ನು ದಿನಾಂಕ:26.11.2022ರ ಪೂರ್ವದಲ್ಲಿ ಹಮ್ಮಿಕೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

 


Join The Telegram Join The WhatsApp
Admin
the authorAdmin

Leave a Reply