ಸಿಎಎ ನಿಯಮಗಳ ಅಧಿಸೂಚನೆ ಹೊರಡಿಸಿದ ಬಳಿಕ ಕೇಂದ್ರದ ಮೋದಿ ಸರ್ಕಾರ 2014ರ ಡಿ.31ರ ವರೆಗೆ ಭಾರತಕ್ಕೆ ವಲಸೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದ ಹಿಂದೂ, ಸಿಖ್, ಜೈನ, ಬುದ್ಧ, ಪಾರ್ಸಿ ಹಾಗೂ ಕ್ರೈಸ್ತರಿಗೆ ದೇಶದ ಪೌರತ್ವ ನೀಡಲಿದೆ.
2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಆದರೆ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ ಹೊರಡಿಸಿರಲಿಲ್ಲ.

ದೆಹಲಿ : ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೊನೆಗೂ ಪೌರತ್ವ ಕಾಯ್ದೆಯನ್ನು ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.
ಪೌರತ್ವ (ಸಿಎಎ)ಜಾರಿ ಸಂಬಂಧ ಇಂದು ಸಂಜೆ ಈ ಮಹತ್ವದ ಅಧಿಸೂಚನೆ ಹೊರಡಿಸಿದೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಈ ಹಿಂದೆ ಲೋಕಸಭೆ ಚುನಾವಣೆಗೂ ಮುನ್ನ ಸಿಎಎಯನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದರು.

ಕಾಯ್ದೆಯಿಂದ ಯಾರಿಗೂ ತೊಂದರೆ ಇಲ್ಲ, ಅದರಲ್ಲೂ ಅಲ್ಪಸಂಖ್ಯಾತರಿಗೆ ಯಾವ ಸಮಸ್ಯೆಯೂ ಆಗುವುದಿಲ್ಲ. ಈ ಕಾಯ್ದೆ ಪೌರತ್ವ ನೀಡುವುದೇ ಹೊರತು ಕಿತ್ತುಕೊಳ್ಳುವುದಲ್ಲ. ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ಸುಳ್ಳು ಪ್ರಚಾರ ಮಾಡುತ್ತಿವೆ. ಮುಸ್ಲಿಂ ಸಹೋದರರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದರು.

ಸಿಎಎ ಜಾರಿಯಿಂದ 2014ರ ಡಿಸೆಂಬರ್ 31ಕ್ಕೂ ಮೊದಲು ಬಾಂಗ್ಲಾ, ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ನಿರಾಶ್ರಿತರಿಗೆ ಪೌರತ್ವ ದೊರೆಯಲಿದೆ.

ಕೇಂದ್ರ ಸರ್ಕಾರ ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಪ್ರತಿಭಟನೆ, ವಿರೋಧಗಳಿಂದ ವಿಳಂಬವಾಗಿತ್ತು.

ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಸಿಎಎ ನಿಮಯಗಳ ಅಧಿಸೂಚನೆ ಹೊರಡಿಸಲಾಗಿದೆ.

ಸಂಸತ್ತಿನಲ್ಲಿ ಅಂಗೀಕಾರವಾಗಿ ನಾಲ್ಕು ವರ್ಷಗಳ ನಂತರವೂ, ಸಿಎಎ ನಿಯಮಗಳು ಮತ್ತು ಪ್ರಕ್ರಿಯೆಯನ್ನು ಅಂತಿಮಗೊಳಿಸಬೇಕಾಗಿರುವುದರಿಂದ ಜಾರಿಗೆ ಬಂದಿರಲಿಲ್ಲ. ಇದೀಗ ಸರ್ಕಾರ ಎಲ್ಲ ಸಿದ್ಧತೆಗಳ ಬಳಿಕ ಜಾರಿಗೆ ತಂದಿದೆ.

2015ಕ್ಕಿಂತ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಸರ್ಕಾರ ಭಾರತೀಯ ಪೌರತ್ವ ನೀಡಬಹುದು. ನಿಯಮಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಈಗಾಗಲೇ ಆನ್​ಲೈನ್​ ಪೋರ್ಟಲ್ ಅನ್ನು ಸ್ಥಾಪಿಸಲಾಗಿದೆ. ಅರ್ಜಿದಾರರು ಪ್ರಯಾಣದ ದಾಖಲೆಗಳಿಲ್ಲದೆ ಪ್ರವೇಶದ ವರ್ಷವನ್ನು ಬಹಿರಂಗಪಡಿಸಬಹುದು. ಯಾವುದೇ ಹೆಚ್ಚುವರಿ ದಾಖಲೆಗಳ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ