ಬೆಂಗಳೂರು: 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.

ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ 28ಕ್ಕೆ ಕೊನೆಯ ಪರೀಕ್ಷೆ ಇರುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಆದೇಶ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನ ಮಧ್ಯಾಹ್ನ 2:30ಕ್ಕೆ ಪರೀಕ್ಷೆ ನಡೆಯಲಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಲ್ಲದ ದಿನ ಬೆಳಿಗ್ಗೆ 10 ಗಂಟೆಗೆ ಪರೀಕ್ಷೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ‌ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ.
5ನೇ ತರಗತಿ ವೇಳಾಪಟ್ಟಿ
25-03-2024- ಪರಿಸರ ಅಧ್ಯಯನ
26-03-2024- ಗಣಿತ
8ನೇ ತರಗತಿ ವೇಳಾಪಟ್ಟಿ
25-03-2024- ತೃತೀಯ ಭಾಷೆ
26-03-2024- ಗಣಿತ
27-03-2024- ವಿಜ್ಞಾನ
28-03-2024- ಸಮಾಜ ವಿಜ್ಞಾನ
9ನೇ ತರಗತಿ ವೇಳಾಪಟ್ಟಿ
25-03-2024- ತೃತೀಯ ಭಾಷೆ
26-03-2024- ಗಣಿತ
27-03-2024- ವಿಜ್ಞಾನ
28-03-2024- ಸಮಾಜ ವಿಜ್ಞಾನ