Join The Telegram | Join The WhatsApp |
ಬೆಂಗಳೂರು :
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಅವರ ಸಮ್ಮುಖದಲ್ಲಿ ಮಾಜಿ ಸಂಸದ, ಮಾಜಿ ಶಾಸಕ, ಹಾವೇರಿ ಜಿಲ್ಲೆ ಶಿಗ್ಗಾವ್ ನ ಬಿಜೆಪಿ ಮುಖಂಡ, ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಮಂಜುನಾಥ್ ಕುನ್ನೂರ, ಅವರ ಪುತ್ರ ರಾಜು ಕುನ್ನೂರ, ಕೆ.ಆರ್. ಪೇಟೆಯ ಜೆಡಿಎಸ್ ದೇವರಾಜ್, ಶಿವಮೊಗ್ಗದ ಬಿಜೆಪಿ ಮುಖಂಡ ಅರುಣ್ ಹಾಗೂ ಮಾಜಿ ಶಾಸಕ ಸುಧಾಕರ್ ಬೆಂಬಲಿತ ಚಿಂತಾಮಣಿಯ ಅನ್ಯಪಕ್ಷಗಳ ಮುಖಂಡರು ತಮ್ಮ ಬೆಂಬಲಿಗರ ಜತೆ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.
Join The Telegram | Join The WhatsApp |