ಬನವಾಸಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬನವಾಸಿಗೆ ಆಗಮಿಸಿ ಕದಂಬೋತ್ಸವ ಉದ್ಘಾಟಿಸುವ ಮೊದಲು ಮಧುಕೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವಸ್ಥಾನದ ಹಿರಿಮೆಯನ್ನು ಕೇಳುತ್ತಾ ಇಡೀ ದೇವಸ್ಥಾನವನ್ನು ವೀಕ್ಷಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ಶಿವರಾಂ ಹೆಬ್ಬಾಳ್, ಭೀಮಣ್ಣ ನಾಯಕ್, ಸತೀಶ್ ಸೈಲ್, ಮಾಜಿ ಶಾಸಕಿ ಹಾಗೂ ಯುವ ನಾಯಕಿ ಅಂಜಲಿ ನಿಂಬಾಳ್ಕರ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.