ಬೆಂಗಳೂರು :
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಭಾಗಿಯಾಗಲಿದ್ದಾರೆ.

ಅಂದಹಾಗೇ 219 ಡಯಾಲಿಸಿಸ್ ಕೇಂದ್ರಗಳು, 800 ಡಯಾಲಿಸಿಸ್ ಯಂತ್ರಗಳನ್ನು ಒಳಗೊಂಡಿದೆ. ಇವುಗಳಿಗೆ ವಾರ್ಷಿಕ ಯೋಜನಾ ವೆಚ್ಚ 108 ಕೋಟಿಯಾಗಿದೆ. ಇವುಗಳಿಂದ 7.20 ಲಕ್ಷ ವಾರ್ಷಿಕ ಡಯಾಲಿಸಿಸ್ ಸೈಕಲ್ ಗಳು ನಡೆಯಲಿವೆ. ಇದಷ್ಟೇ ಅಲ್ಲದೇ ಡಯಾಲಿಸಿಸ್ ಗುಣಮಟ್ಟ ಹೆಚ್ಚಿಸಲು ಏಕ ಬಳಕೆಯ ಡಯಾಲೈಸರ್ ಅಳವಡಿಸಲಾಗಿದೆ. ಈ ಮೂಲಕ ಡಯಾಲಿಸಿಸ್ ರೋಗಿಗಗಳು ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಹಿಸಿದ್ರೇ, ಮುಖ್ಯ ಅತಿಥಿಗಳಾಗಿ ಸಚಿವ ರಾಮಲಿಂಗಾರೆಡ್ಡಿ, ಕೆ.ಜೆ ಜಾರ್ಜ್, ಕೃಷ್ಣ ಬೈರೇಗೌಡ, ಜಮೀರ್ ಅಹ್ಮದ್ ಖಾನ್, ಬಿಎಸ್ ಸುರೇಶ್ ಕೂಡ ಹಾಜರಿರಲಿದ್ದಾರೆ. ಜೊತೆಗೆ ವಿಪಕ್ಷ ನಾಯಕ ಆರ್ ಅಶೋಕ್ ಭಾಗವಹಿಸಲಿದ್ದಾರೆ