ಬೆಳಗಾವಿ :
ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.
ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಮಾತನಾಡಿ ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು ಉಚ್ಚ ನ್ಯಾಯಾಲಯ ಅವರಿಗೆ ಗುಂಡಿ ಮುಚ್ಚಿಲ್ಲ ಎಂದು ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.
ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿದ.ಮುಖ್ಯ ಮಂತ್ರಿಗಳು ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ ಎಂದರು. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ. ಬಹುತೇಕ ಜನ ವಾಪಸ್ಸು ಬಂದಿದ್ದಾರೆ ಎಂದರು.
ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.