ಮಂಗಳೂರು : ಜಾತಿಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

*ಜಾತಿ ಗಣತಿ ವರದಿ: ವಿರೋಧ ಏಕೆ?*

ಪ್ರತಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲದೇ ವಿರೋಧ ಏಕೆ ಮಾಡುತ್ತಾರೆ. ವರದಿ ಇನ್ನೂ ಬಹಿರಂಗಗೊಳ್ಳದಿರುವುದರಿಂದ ಈ ಬಗ್ಗೆ ನನಗೂ ತಿಳಿದಿಲ್ಲ ಎಂದರು

ನಮ್ಮ ಪ್ರಣಾಳಿಕೆಯಲ್ಲಿ ಜಾತಿಗಣತಿಯನ್ನು ಮಂಡಿಸಲಾಗುವುದು ಎಂದು ಜನತೆಗೆ ಭರವಸೆ ನೀಡಲಾಗಿದೆ ಎಂದರು.

*ದರೋಡೆಕೋರರನ್ನು ಕೂಡಲೆ ಪತ್ತೆ ಹಚ್ಚಲು ಸೂಚನೆ*

ಉಲ್ಲಾಳ್ ನಲ್ಲಿ ನಡೆದಿರುವ ದರೋಡೆ ಪ್ರಕರಣದ ಬಗ್ಗೆ ಮಾತನಾಡಿ ದರೋಡೆಕೋರರನ್ನು ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.