ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ತಮ್ಮ ವಿರುದ್ಧ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಕಾನೂನು ಹೋರಾಟ ಆರಂಭಿಸಿದ್ದು, ಹೈಕೋರ್ಟ್‌ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮೂವರು ದೂರುದಾರರನ್ನು ಪ್ರತಿವಾದಿಯನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಸಚಿವ ಸಂಪುಟದ ಶಿಫಾರಸ್ಸಿಗೆ ವಿರುದ್ಧವಾಗಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಅನುಮತಿಗೂ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ತಿಳಿಸಲಾಗಿದೆ.