ಮೈಸೂರು: ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ ಅವರನ್ನು ಜಮೀನು ವಿವಾದ ಸಂಬಂಧ ಪಟ್ಟಂತೆ ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಕೋಟ್ಯಂತರ ರೂಪಾಯಿ ಬೆಲೆಬಾಳುವ 14 ನಿವೇಶನಗಳನ್ನು ಪಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಅವರನ್ನು ವಿಚಾರಣೆ ನಡೆಸಿದ್ದಾರೆ. ಸಾರ್ವಜನಿಕವಾಗಿ ಸಿಎಂ ಪತ್ನಿ ಕಾಣಿಸಿಕೊಳ್ಳುವುದನ್ನು ತಪ್ಪಿಸಲು ರಹಸ್ಯ ಸ್ಥಳದಲ್ಲಿ ಅವರಿಂದ ಅಗತ್ಯ ಮಾಹಿತಿ ಪಡೆಯಲಾಗಿದೆ.
ಮೈಸೂರಿನ ದೇವನೂರು ಮೂರನೇ ಹಂತದ ಜಮೀನಿಗೆ ಬದಲಾಗಿ ವಿಜಯನಗರ ಬಡಾವಣೆಯಲ್ಲಿ 14 ನಿವೇಶನ ಮಂಜೂರು ಮಾಡಲಾಗಿತ್ತು ಎಂದು ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಪತ್ನಿಯನ್ನು ವಿಚಾರಣೆ ಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.