ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿ ಎಸ್.ರಾಚಯ್ಯ ಅವರನ್ನು ಕಾಯಂಗೊಳಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಎಸ್‌. ರಾಚಯ್ಯ ಅವರನ್ನು ಕಾಯಂ ನ್ಯಾಯಮೂರ್ತಿಯಾಗಿ ನೇಮಕ ಮಾಡಲು 2024ರ ಆ.6ರಂದು ಕರ್ನಾಟಕ ಹೈಕೋರ್ಟ್ ಕೊಲಿಜಿಯಂ ಸುಪ್ರಿಂ ಕೋರ್ಟ್‌ಗೆ ಶಿಫಾರಸು ಮಾಡಿತ್ತು. ಅದನ್ನು ಪರಿಗಣಿಸಿ ಸುಪ್ರಿಂ ಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಅ.15ರಂದು ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ ಅವರು 1998ರ ಜ.24ರಂದು ವಕೀಲಿಕೆ ಆರಂಭಿಸಿದ್ದರು. 2015ರ ಡಿ.3ರಂದು ಹೈಕೋರ್ಟ್ ಸರ್ಕಾರಿ ವಕೀಲರಾಗಿ ನೇಮಕಗೊಂಡಿದ್ದರು. ನಂತರ ಸರ್ಕಾರಿ ಅಭಿಯೋಜಕರಾಗಿ ನಿಯೋಜನೆಗೊಂಡಿದ್ದರು. 2021ರ ನ.8ರಂದು ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ ಅವರನ್ನು ಕಾಯಂಗೊಳಿಸಲು ಸುಪ್ರಿಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.