ಯಲ್ಲಾಪುರ :
ರಾಜ್ಯಸಭೆ ಚುನಾವಣೆ ಮತದಾನದ ವೇಳೆ ಗೈರಾಗಿದ್ದ ಬಿಜೆಪಿ ರೆಬಲ್ ಶಾಸಕ ಶಿವರಾಮ ಹೆಬ್ಬಾರ್‌ ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡಿ ಎಂದು ಪಟ್ಟಣ ಪಂಚಾಯತಿ ಸದಸ್ಯ ಸೋಮೇಶ್ವರ ನಾಯ್ಕ ಮಂಗಳವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದಾರೆ.

ಶಿವರಾಮ ಹೆಬ್ಬಾ‌ರ್ ಅವರು ರಾಜ್ಯಸಭೆ ಚುನಾವಣೆಯಲ್ಲಿ ಮತ ಚಲಾಯಿಸಬೇಕಿತ್ತು. ಬಿಜೆಪಿ ವಿಪ್ ಜಾರಿ ಮಾಡಿ ಅವರ ಬೆಂಗಳೂರು ಕಚೇರಿಗೆ ಬಾಗಿಲಿಗೆ ಅಂಟಿಸಿದೆ. ಆದರೆ ಮಂಗಳವಾರ ಬೆಳಗ್ಗೆಯಿಂದ ಅವರ ಮೊಬೈಲ್‌ ಸ್ವಿಚ್‌ ಆಫ್ ಆಗಿದೆ. ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರನ್ನು ಹುಡುಕಿಕೊಡಿ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರು ಈಗ ಚರ್ಚೆಗೆ ಗ್ರಾಸವಾಗಿದೆ.