ಬೆಳಗಾವಿ : ಪಾಂಡಿಚೇರಿಯ ಮನುಕುಲ ವಿನಯಾಗರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಫೆ.೨೮ ರಂದು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಪ್ರಾಜೆಕ್ಟ್ ಸ್ಪರ್ಧೆ ಏರ್ಪಡಿಸಲಾಗಿತ್ತು.

ಬೆಳಗಾವಿ ನಗರದ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಪ್ರಸಕ್ತ ಸಾಲಿನ ಯಾಂತ್ರಿಕ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಾದ ರೋಹನ ಗಸ್ತಿ, ಕಾರ್ತಿಕ ತಾರಿಹಾಳ, ಸಿದ್ದಾರ್ಥ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಪ್ರಾಂಶುಪಾಲ ವಾಸುದೇವ ಅಪ್ಪಾಜಿಗೋಳ ಹಾಗೂ ಯಾಂತ್ರಿಕ ವಿಭಾಗದ ಮುಖ್ಯಸ್ಥರಾದ ಗಂಗಾಧರ ಹುನಗುಂದ ಅವರು ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಲಿಂಗರಾಜ ಶಾಮನೂರ ಹಾಗೂ ಶಿವಲಿಂಗ ಮೂಕನವರ ಅವರನ್ನು ಅಭಿನಂದಿಸಿದರು.