ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್‌ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ದಿನ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ.

ಶನಿವಾರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಖಾನಾಪುರ ತೊಲಗಿ ಗ್ರಾಮಕ್ಕೆ ಭೇಟಿ ನೀಡಿದ್ದ ಅಂಜಲಿ, ಮನೆ ಮನೆಗೆ ತೆರಳಿ ಮತ ಕೇಳಿದರು. ಈ ವೇಳೆ ಮಹಿಳೆಯ ಜೊತೆ ಬೈಕ್‌ ಮೇಲೆ ತೆರಳಿ ಗಮನ ಸೆಳೆದರು.

ಸಂಗೀತಾ ಎಂಬ ಮಹಿಳೆ ಜೊತೆ ಬೈಕ್‌ ಏರಿ ಭರ್ಜರಿ ರೈಡ್‌ ಮಾಡಿದ್ದಾರೆ. ಗ್ರಾಮದ ತುಂಬೆಲ್ಲಾ ಬೈಕ್‌ ಮೇಲೆ ಸುತ್ತಾಡಿ ಮತಯಾಚನೆ ಮಾಡಿದ್ದಾರೆ. ಈ ವಿಡಿಯೋವನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.