- ಪುತ್ತೂರು: ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿಯವರಿಗೆ ಅತ್ಯಧಿಕ ಮತಗಳು ದೊರೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರು ಹೇಳಿದರು.
ಅವರು ಬೆಟ್ಟಂಪಾಡಿ ಗ್ರಾಪಂ ಮತಗಟ್ಟೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನವೀನ್ ರೈ ಅವರು ಮತದಾನ ಮಾಡಿದ ಬಳಿಕ ಮಾತನಾಡಿದರು.
ರಾಜು ಪೂಜಾರಿಯವರು ನಿಷ್ಟಾವಂತ ಕಾರ್ಯಕರ್ತರಾಗಿದ್ದು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿರುವ ಅವರು ಅಪ್ಪಟ ಜಾತ್ಯಾತೀತ ಮನೋಭಾವ ಉಳ್ಳವರು. ಇವರಿಗೆ ಮತದಾರರು ಬೆಂಬಲ ನೀಡಲಿದ್ದಾರೆ ಎಂದು ಹೇಳಿದರು.ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ:
ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿದ ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ
ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದು ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದು ,ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.