ನವದೆಹಲಿ:
ಕೇಂದ್ರದಲ್ಲಿ ಆಡಳಿತರೂಢ ಬಿಜೆಪಿ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸುವ ಮೂಲಕ ಲೋಕಸಭಾ ಚುನಾವಣೆಯ ರಣಕಹಳೆ ಮೊಳಗಿಸಿದೆ. ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಈತ ಕಾಂಗ್ರೆಸ್ ಪಕ್ಷ ತನ್ನ ಮೊದಲ ಪಟ್ಟಿ ಬಿಡುಗಡೆಗೆ ಇನ್ನಿಲ್ಲದ ಪ್ರಯತ್ನ ನಡೆಸಿದೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ
ಅಂತಿಮಗೊಳಿಸಲು ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ಮಾ.7ರಂದು ತನ್ನ ಸಭೆ ನಡೆಯಲಿದೆ. ಸಭೆ ಬಳಿಕ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಮಾಡಬಹುದು ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಕೇಂದ್ರ ಚುನಾವಣೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಈ ಸಮಿತಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಇದ್ದಾರೆ. ಈ ಸಮಿತಿಗೆ ರಾಜ್ಯಗಳು ಆಯಾ ಕ್ಷೇತ್ರಗಳಿಗೆ ಟಿಕೆಟ್ ನೀಡಬಹುದಾದ ಅಭ್ಯರ್ಥಿಗಳ ಪಟ್ಟಿ ಕಳುಹಿಸಿದೆ. ಈ ಸಮಿತಿ ಪಟ್ಟಿಯನ್ನು ಪರಾಮರ್ಶೆ ನಡೆಸಿ ಪ್ರಕಟ ಮಾಡಲಿದೆ.