ಬೆಂಗಳೂರು : ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಅವರನ್ನೇ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಬಿರುಸಿನ ಚಟುವಟಿಕೆ ನಡೆದಿವೆ. ಸ್ವಾಮೀಜಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿರುವುದಾಗಿ ನಿನ್ನೆಯಷ್ಟೇ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಪಕ್ಷ ಸ್ವಾಮೀಜಿ ಅವರನ್ನೇ ಕಣಕ್ಕಿಳಿಸಲು ಮುಂದಾಗಬಹುದು ಎಂಬ ಸನ್ನಿವೇಶ ಸೃಷ್ಟಿಯಾಗಿದೆ. ಧಾರವಾಡಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ ಅಸೂಟಿ ಅವರನ್ನು ಈಗಾಗಲೇ ಪಕ್ಷ ಘೋಷಣೆ ಮಾಡಿದ್ದು ಅವರಿಗೆ ಬಿ ಫಾರಂ ನೀಡಲಾಗಿದೆ.

ಈ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡಿರುವ ದಿಂಗಾಲೇಶ್ವರ ಸ್ವಾಮಿಜಿ ಕಾಂಗ್ರೆಸ್ ಪಕ್ಷದಿಂದ ಆಫರ್ ಬಂದರೆ ಅದನ್ನು ಮತದಾರರ ಮುಂದಿಟ್ಟು ಅಭಿಪ್ರಾಯ ಸಂಗ್ರಹಿಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.