Join The Telegram | Join The WhatsApp |
ಬೆಳಗಾವಿ :
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಯವರ ಸಮ್ಮುಖದಲ್ಲಿ ಯಮಕನಮರಡಿ ಮತಕ್ಷೇತ್ರದ ಚಿಲಭಾಂವಿ ಗ್ರಾಮದಲ್ಲಿ ಬಿಜೆಪಿಯ ಹಿರಿಯ ಮುಖಂಡ ಕರುಣಾಕರ ಶೆಟ್ಟಿ ಮತ್ತು ಹಲವಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಸೇರ್ಪಡೆ ನಂತರ ಸತೀಶ ಜಾರಕಿಹೊಳಿ ಮಾತನಾಡಿ, ಶಾಲೆಗಳ ಅಭಿವೃದ್ಧಿ ಸೇರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿ ಮಾಡಿದ್ದೇನೆ. ಕಳೆದ 15 ವರ್ಷಗಳ ಹಿಂದೆ ಇದ್ದ ಯಮಕನಮರಡಿ ಕ್ಷೇತ್ರ ಈಗ ಹೇಗೆ ಅಭಿವೃದ್ಧಿ ಹೊಂದಿದೆ ಎಂಬುವುದರ ಬಗ್ಗೆ ಕ್ಷೇತ್ರದ ಜನರು ಯೋಚಿಸಬೇಕು ಹೊರತು ಅಪಪ್ರಚಾರಕ್ಕೆ ಕಿವಿಗೊಡಬಾರದು. ಕಾರ್ಯಕರ್ತರು ಮನೆಮನೆಗೆ ತೆರಳಿ ನಾವು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಪಕ್ಷದ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಎಲ್ಲರೂ ಒಗ್ಗಟ್ಟಿನ ಮೂಲಕ ಕೆಲಸ ಮಾಡಬೇಕು ಎಂದು ಕಾಂಗ್ರೆಸ್ ಸೇರಿದ ನೂತನ ಕಾರ್ಯಕರ್ತರನ್ನು ಸ್ವಾಗತಿಸಿ ಮಾತನಾಡಿದರು.
ಯುವ ಕಾಂಗ್ರೆಸ್ ಮುಖಂಡ ರಾಹುಲ್ ಅಣ್ಣಾ ಜಾರಕಿಹೊಳಿ ಹಾಗೂ ಗ್ರಾಮದ ಹಿರಿಯರು ಯುವಕರು ಉಪಸ್ಥಿತರಿದ್ದರು.
Join The Telegram | Join The WhatsApp |