Join The Telegram | Join The WhatsApp |
ಬೆಂಗಳೂರು :
ರಾಜ್ಯ ಸರ್ಕಾರವು ಜಲ ನೀತಿ ಅನ್ವಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ನಿಯಮಗಳಲ್ಲಿ ಸರಳೀಕರಣ ಮಾಡಿ ಸುತ್ತೋಲೆ ಹೊರಡಿಸಿದೆ. ಮನೆಗಳಿಗೆ ಕುಡಿಯುವ ನೀರಿನ ನಳ ಸಂಪರ್ಕ ಪಡೆಯಲು ಸೂಕ್ತ ದಾಖಲೆಗಳು ಇಲ್ಲದಿದ್ದರೆ ಆಧಾರ್ ಕಾರ್ಡ್ ಮತ್ತು ನಷ್ಟ ಭರ್ತಿ ಮುಚ್ಚಳಿಕೆ ಪಡೆದು ನಳ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿದೆ.
ಎಲ್ಲ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರು ಕೈಗಟಕುವ ದರದಲ್ಲಿ ಕೊಳವೆ ಸಂಪರ್ಕದ ಮೂಲಕ ಒದಗಿಸುವುದ ಸರ್ಕಾರದ ಉದ್ದೇಶವಾಗಿದೆ.ಮನೆಗಳಿಗೆ ಕುಡಿಯುವ ನೀರು ಸಂಪರ್ಕ ಪಡೆಯಲು ನಷ್ಟ ಭರ್ತಿ ಮುಚ್ಚಳಿಕೆಯನ್ನು ನಿಗದಿತ ನಮೂನೆಗಳಲ್ಲಿ 50 ರೂ. ಸ್ಟಾಂಪ್ ಪೇಪರ್ ನಲ್ಲಿ ವಿಳಾಸದ ಪುರಾವೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಲೀಕತ್ವ ಇಲ್ಲದವರು ನಗರ ಸ್ಥಳೀಯ ಸಂಸ್ಥೆಗೆ ಯಾವುದೇ ನಷ್ಟ ಉಂಟಾದರೆ ಅರ್ಜಿದಾರರೇ ಆ ನಷ್ಟವನ್ನು ಭರ್ತಿ ಮಾಡುತ್ತೇವೆಂದು ಮುಚ್ಚಳಿಕೆ ನೀಡಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.
Join The Telegram | Join The WhatsApp |